ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ.
ಭೀಕರ ಅಪಘಾತದಲ್ಲಿ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ(65)ಹಾಗೂ ಪುರದಳ್ಳಿಯ ಬೈಲಪ್ಪ(65) ಸೇರಿ ಮೂವರು ಮೃತಪಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.