ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ಘೋಷಿಸಿರುವುದರಲ್ಲಿ ಏನೋ ಅನುಮಾನಾಸ್ಪದ ಅಂಶವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.
ಧನಕರ್ ಬಿಜೆಪಿ-ಆರ್‌ಎಸ್‌ಎಸ್ ಜನರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು 'ಸಮರ್ಥಿಸಿಕೊಳ್ಳುತ್ತಿದ್ದರು'. ಆದರೆ, ಅಂತಹವರೇ ರಾಜೀನಾಮೆ ನೀಡಬೇಕಾಯಿತು.
ರಾಜೀನಾಮೆ ಹಿಂದಿನ ಕಾರಣವೇನು ಮತ್ತು ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ದೇಶದ ಜನರಿಗೆ ತಿಳಿಸಬೇಕು' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.