ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದೆ.
ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಸೋಮವಾರ ಪರಿಶೀಲನೆ ನಡೆಸಿತು. ವಿಡಿಯೋ ಇಲ್ಲಿದೆ ನೋಡಿ.