ಮಧ್ಯ ಪ್ರದೇಶದ ಜಬುವಾ ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ಸಿಮೆಂಟ್ ತುಂಬಿದ ಟ್ರೇಲರ್ ಟ್ರಕ್ ವ್ಯಾನ್ ಮೇಲೆ ಉರುಳಿ ಬಿದ್ದು ಅವಘಡ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಬೆಳಗಿನ ಜಾವ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.