ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ(ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ.
ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಮತ್ತು ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಲೆ ಸಂಭವಿಸಿದೆ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದೇವೆ.
ನಿರ್ದಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಬಗ್ಗೆ ಜೂನ್ 12 ರಂದು ಸಚಿವ ಸಂಪುಟ ಸಭೆಯಲ್ಲಿ ಕಾಲ ಮಿತಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ವಿಡಿಯೋ ಇಲ್ಲಿದೆ ನೋಡಿ.