ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ನಮ್ಮ ಸಂಘಟನೆ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಬುಧವಾರ ಹೇಳಿದ್ದಾರೆ.
ಕರ್ನಾಟಕ ಹೈಕೋರ್ಟ್‌ನ ಸಲಹೆಯಂತೆ, ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂಬ ತಮ್ಮ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಬೇಕಿತ್ತು ಎಂದು ಅವರು ಹೇಳಿದರು.
ಆದರೆ, ಈ ವಿಷಯದ ಕುರಿತು ಕಮಲ್ ಹಾಸನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದರಿಂದಾಗಿ ನ್ಯಾಯಾಲಯದ ಆದೇಶವನ್ನು ಸ್ವೀಕರಿಸುವುದಾಗಿ ಶೆಟ್ಟಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.