ಇರಾನಿನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕದ ದಾಳಿಯ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ.
ಇದರ ಹೊರತಾಗಿಯೂ ಭಾರತದ ಇಂಧನ ಭದ್ರತೆಯು ಹಾಗೆಯೇ ಉಳಿದಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭರವಸೆ ನೀಡಿದ್ದಾರೆ.
ಕಳೆದ ಎರಡು ವಾರಗಳಿಂದ ಮಧ್ಯಪ್ರಾಚ್ಯದಲ್ಲಿ ವಿಕಸನಗೊಳ್ಳುತ್ತಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ.
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ, ಕಳೆದ ಕೆಲವು ವರ್ಷಗಳಿಂದ ನಮ್ಮ ಸರಬರಾಜುಗಳು ವಿವಧೆಡೆಗಳಿಂದ ಬರುತ್ತವೆ.
ನಮ್ಮ ಸರಬರಾಜುಗಳಲ್ಲಿ ಹೆಚ್ಚಿನ ಪ್ರಮಾಣವು ಈಗ ಹಾರ್ಮುಜ್ ಜಲಸಂಧಿಯ ಮೂಲಕ ಬರುವುದಿಲ್ಲ ಎಂದು ಪುರಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.