Watch | ಸಿದ್ರಾಮಣ್ಣತ್ರ ದುಡ್ಡಿಲ್ಲ ಈಗ, ಇರೋ ದುಡ್ಡಲ್ಲಿ ನಿಮ್ಗೆ ಅಕ್ಕಿ, ಬೇಳೆ 'ಎಣ್ಣೆ' ಕೊಟ್ಬಿಟ್ಟಿದ್ದೀವಿ!
ಗೃಹ ಸಚಿವ ಡಾ. ಜಿ ಪರಮೇಶ್ವರ, ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಮಾತುಗಳು ವ್ಯಾಪಕವಾಗಿ ವೈರಲ್ ಆಗಿದೆ.
ಬಾಗಲಕೋಟೆಯಲ್ಲಿ ನಿನ್ನೆ ಮಾತನಾಡಿದ್ದ ಗೃಹ ಸಚಿವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ.
ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ, ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.