ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಸಾಕಷ್ಟು ಶಕ್ತಿ ಕೇಂದ್ರಗಳಿದ್ದು, ಸೆಪ್ಟೆಂಬರ್ ನಂತರ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಗುರುವಾರ ಹೇಳಿದ್ದರು.
ಈ ವರ್ಷದ ಕೊನೆಯಲ್ಲಿ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆ ಆಗಲಿದೆ ಎಂಬ ಊಹಾಪೋಹಗಳ ನಡುವೆ ರಾಜಣ್ಣ ನೀಡಿರುವ ಹೇಳಿಕೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ತಮ್ಮ ಹೇಳಿಕೆಗಳ ಬಗ್ಗೆ ಸಚಿವ ರಾಜಣ್ಣ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿ ಸ್ಪಷ್ಟನೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.