ಭಾರತದಲ್ಲಿ ಸಮಾಜವಾದದ ಅಗತ್ಯವಿಲ್ಲ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಜಾತ್ಯತೀತತೆ ನಮ್ಮ ಸಂಸ್ಕೃತಿಯ ಮೂಲವಲ್ಲ ಎಂದು ಹೇಳಿದ್ದಾರೆ.
ವಾರಣಾಸಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೌಹಾಣ್, ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಪರಿಶೀಲಿಸಬೇಕೆಂಬ ಆರ್‌ಎಸ್‌ಎಸ್ ಕರೆಗೆ ಪರೋಕ್ಷವಾಗಿ ಬೆಂಬಲಿಸಿದರು.
ಭಾರತದಲ್ಲಿ ಸಮಾಜವಾದದ ಅಗತ್ಯವಿಲ್ಲ. ಜಾತ್ಯತೀತತೆಯು ನಮ್ಮ ಸಂಸ್ಕೃತಿಯ ತಿರುಳಲ್ಲ, ಆದ್ದರಿಂದ ಅದನ್ನು ಪರಿಗಣಿಸಬೇಕು ಎಂದು ಚೌಹಾಣ್ ಹೇಳಿದರು.
'ತುರ್ತು ಪರಿಸ್ಥಿತಿಗೆ 50 ವರ್ಷ' ಕಾರ್ಯಕ್ರಮದಲ್ಲಿ ಗುರುವಾರ, ಸಂವಿಧಾನದ ಪೀಠಿಕೆಯಿಂದ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ತೆಗೆದುಹಾಕಲು RSS ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.