ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ICC ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿ ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆಯೇ ದೇಶಾದ್ಯಂತ ಸಂಭ್ರಮ ಮನೆಮಾಡಿದೆ.
ರಾಷ್ಟ್ರ ರಾಜಧಾನಿ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ ಸೇರಿದಂತೆ ರಾಷ್ಟ್ರದ ವಿವಿಧ ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ತ್ರಿವರ್ಣ ಧ್ವಜ ಹಿಡಿದು ರಸ್ತೆಗಿಳಿದು, ಟೀಂ ಇಂಡಿಯಾ ಪರ ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದ್ದಾರೆ.
ಹರ್ಷೋದ್ಗಾರಗಳೊಂದಿಗೆ ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಿಹಿ ಹಂಚಿ ಸಂಭ್ರಮಪಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.