ಪಾಕಿಸ್ತಾನದ ವಶದಲ್ಲಿರುವ ಬಲೂಚಿಸ್ತಾನವನ್ನು ಸ್ವತಂತ್ರ್ಯಗೊಳಿಸಬೇಕು ಎಂದು ಹೋರಾಡುತ್ತಿರುವ ಬಲೂಚ್ ಲಿಬರೇಶನ್ ಆರ್ಮಿ (BLA) ಪಾಕಿಸ್ತಾನದ ಪ್ಯಾಸೆಂಜರ್ ರೈಲನ್ನೇ ಹೈಜಾಕ್ ಮಾಡಿದೆ.
ಕ್ವೆಟ್ಟಾದಿಂದ ಖೈಬರ್ ಪಖ್ತುಂಕ್ವಾದ ಪೇಶಾವರ್‌ಗೆ ತೆರಳುತ್ತಿದ್ದ ಪಾಕಿಸ್ತಾನ ರೈಲ್ವೇ ಇಲಾಖೆಗೆ ಸೇರಿದ ಜಾಫರ್ ಎಕ್ಸ್‌ಪ್ರೆಸ್ ಅನ್ನು ಬಲೂಚಿಸ್ತಾನ ಬಂಡುಕೋರರು ಅಪಹರಿಸಿದ್ದಾರೆ.
ಈ ರೈಲಿನ ಸುಮಾರು 9 ಬೋಗಿಗಳಲ್ಲಿದ್ದ 400ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದು, ರೈಲ್ವೇ ಹಳಿಗಳನ್ನು ಸ್ಫೋಟಿಸಿ ರೈಲನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರ ತಿಳಿಯುತ್ತಲೇ ಪಾಕಿಸ್ತಾನ ಸೇನೆ ಮತ್ತು ಚೀನಾ ಸೇನೆ ಜಂಟಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು ಈ ವರೆಗೂ 150 ಒತ್ತೆಯಾಳುಗಳ ರಕ್ಷಣೆ ಮಾಡಿದೆ.
ಪಾಕಿಸ್ತಾನ ಸೇನಾ ಕಾರ್ಯಾಚರಣೆಯಲ್ಲಿ ಬಲೂಚ್ ಲಿಬರೇಷನ್ ಆರ್ಮಿಯ ಸುಮಾರು 27 ಬಂಡುಕೋರರನ್ನು ಹೊಡೆದುರುಳಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.