ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಬಿಜೆಪಿ 'ಅಸಂವಿಧಾನಿಕ ದುಸ್ಸಾಹಸ' ಎಂದು ಕರೆದಿದೆ.
ಈ ಕ್ರಮದ ವಿರುದ್ಧ ಹೋರಾಟ ನಡೆಸುತ್ತೇವೆ. ಅಲ್ಲದೆ ನ್ಯಾಯಾಲಯದಲ್ಲಿಯೂ ಪ್ರಶ್ನಿಸುತ್ತೇವೆ ಎಂದು ಹೇಳಿದೆ.
ಸಿದ್ದರಾಮಯ್ಯ ಸರ್ಕಾರವು ಪ್ರಸ್ತಾವಿತ ಅಸಂವಿಧಾನಿಕ ದುಸ್ಸಾಹಸವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದೆಹಲಿಯಲ್ಲಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.