ಕರ್ನಾಟಕದಲ್ಲಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರುವುದಾಗಿ ಆಡಳಿತಾರೂಢ ಬಿಜೆಪಿ ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಪ್ರಸ್ತಾಪಿಸಿದ್ದರಿಂದ ಗದ್ದಲ, ಕೋಲಾಹಲ ಉಂಟಾಯಿತು.
ರಾಜ್ಯಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಸಭಾನಾಯಕ ಜೆಪಿ ನಡ್ಡಾ ಅವರು ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅವರ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಹೇಳಿಕೆ ಕುರಿತು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಂದ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದರು. ವಿಡಿಯೋ ಇಲ್ಲಿದೆ ನೋಡಿ.