ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಜಲ್ಲಿಕಲ್ಲು ಹೊತ್ತೊಯ್ಯುತ್ತಿದ್ದ ಲಾರಿ ತೆಲಂಗಾಣ ರಸ್ತೆ ಸಾರಿಗೆ ನಿಗಮದ (ಆರ್‌ಟಿಸಿ) ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಮೇಲೆ ಜಲ್ಲಿಕಲ್ಲು ಬಿದ್ದು ಈ ದುರಂತ ಸಂಭವಿಸಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.