ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಸಿರು ಸೇನೆ ರೈತ ಸಂಘದ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿ ಟನ್‌ಗೆ 3,200 ರೂ ನೀಡುವ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.