ಪ್ರತಿ ಟನ್ ಕಬ್ಬಿಗೆ 3,500 ರೂ. ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.
ಹಸಿರು ಸೇನೆ ರೈತ ಸಂಘದ ಬ್ಯಾನರ್ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿ ಟನ್‌ಗೆ 3,200 ರೂ ನೀಡುವ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.
ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ 5 ದಿನಗಳಿಂದ ರೈತರು ಬಿರುಸಿನ ಗಾಳಿಯಲ್ಲೂ, ಚಳಿಯಲ್ಲೂ ಅಹೋರಾತ್ರಿ ಕುಳಿತು ಹೋರಾಟ ನಡೆಸುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.