ವೈಟ್ ಕಾಲರ್ ಭಯೋತ್ಪಾದಕ ಮಾಡ್ಯೂಲ್ ಮತ್ತು ದೆಹಲಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಂಗಳವಾರ ಒತ್ತಾಯಿಸಿದರು.
ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಗಾಯಗೊಂಡವರ ಬಗ್ಗೆ ವಿಚಾರಿಸಲು ಶುಕ್ರವಾರ ಇಲ್ಲಿನ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಒಮರ್ ಅಬ್ದುಲ್ಲಾ ಮಾತನಾಡಿದರು.
ನಿನ್ನೆ ಉತ್ತರ ವಲಯದ ಮುಖ್ಯಮಂತ್ರಿಗಳ ಸಮ್ಮೇಳನದಲ್ಲೂ ನಾನು ಈ ವಿಷಯವನ್ನು ಪ್ರಸ್ತಾಪಿಸಿದ್ದೆ.
ಕೇಂದ್ರ ಗೃಹ ಸಚಿವರು, ಕೇಂದ್ರ ಗೃಹ ಕಾರ್ಯದರ್ಶಿ, ಉತ್ತರ ವಲಯದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಎಲ್‌ಜಿಗಳು ಅಲ್ಲಿದ್ದರು.
ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ನಾಗರಿಕರನ್ನು, ವಿಶೇಷವಾಗಿ ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ ಎಂದು ನಾನು ಅವರಿಗೆ ಮನವಿ ಮಾಡಿದ್ದೇನೆ ಎಂದರು. ವಿಡಿಯೋ ಇಲ್ಲಿದೆ ನೋಡಿ.