'ನವೆಂಬರ್ ಕ್ರಾಂತಿ'ಯ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದು ಕೇವಲ "ಮಾಧ್ಯಮ ಸೃಷ್ಟಿ" ಎಂದು ಗುರುವಾರ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗೆ ಚಾಮರಾಜನಗರದಲ್ಲಿ ಸಿಎಂ ಪ್ರತಿಕ್ರಿಯಿಸಿದರು.
ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ.
ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ, ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ.
ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ ಎಂದರು. ವಿಡಿಯೋ ಇಲ್ಲಿದೆ ನೋಡಿ.