ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಕಳೆದ ಎರಡೂವರೆ ವರ್ಷಗಳಿಂದ ಸಾಕಷ್ಟು ಔತಣಕೂಟ ನಡೆದಿದೆ.
ನಾಲ್ವರು ಡಿಸಿಎಂ ಮಾಡಬೇಕು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಿಸಬೇಕು. ಸಂಪುಟಕ್ಕೆ ತಮ್ಮನ್ನು ಸೇರಿಸಿಕೊಳ್ಳಬೇಕೆಂದು ಸಾಕಷ್ಟು ಡಿನ್ನರ್ ಸಭೆ ನಡೆದಿವೆ. ಸಚಿವರ ಡಿನ್ನರ್ ಕೂಡ ಅದರ ಒಂದು ಭಾಗವೇ ಇದು ಎಂದು ಮಾರ್ಮಿಕವಾಗಿ ಹೇಳಿದರು.