ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಿಎಂ ಸಿದ್ದರಾಮಯ್ಯ ಬಣದ ತಂತ್ರ ಒಂದು ಕಡೆಯಾದರೆ ಡಿಸಿಎಂ ಡಿಕೆ ಶಿವಕುಮಾರ್ ಬಣವೂ ಪ್ರತಿತಂತ್ರ ರೂಪಿಸುತ್ತಿದೆ. ಈ ಮಧ್ಯೆ ಡಿ.ಕೆ ಶಿವಕುಮಾರ್ ಇಂದು ಸ್ಫೋಟಕ ಹೇಳಿಕೆ ನೀಡಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ ನಾನು ಕೇಳಿಯೇ ಇಲ್ಲ ಎಂದಿದ್ದಾರೆ.