Watch | ಸಿಎಂ-ಡಿಸಿಎಂ ಒಗ್ಗಟ್ಟಿನ ಮಂತ್ರ! ಇದೇನಿದು ಹೈಕಮಾಂಡ್ ತಂತ್ರ?
ತೀವ್ರ ಕುತೂಹಲ ಕೆರಳಿಸಿದ ಶನಿವಾರದ ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಿಎಂ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು.
ನಮ್ಮಿಬ್ಬರ ನಡುವೆ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ, ಮುಂದೆಯೂ ಅದು ಬರಲ್ಲ, ನಮಗೆ ಕರೆ ಮಾಡಿದ್ದ ಹೈಕಮಾಂಡ್ ನಾಯಕರು, ಗೊಂದಲ ತಿಳಿ ಮಾಡುವ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದರು.
ಅದರಂತೆ ನಡೆದುಕೊಳ್ಳುತ್ತೇವೆ. ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ನಡೆದುಕೊಳ್ಳುತ್ತೇವೆ ಎಂದು ಈ ಹಿಂದೆಯೂ ಸ್ಪಷ್ಟಪಡಿಸಿದ್ದೆ.
ಹೀಗಾಗಿ ನಮ್ಮ ನಡುವೆ ನಾಳೆಯಿಂದ ಯಾವುದೇ ಗೊಂದಲ ಇರಲ್ಲ. ಈಗಲೂ ಕೂಡ ಯಾವುದೇ ಗೊಂದಲ ಇಲ್ಲ. ಹಿಂದೆಯೂ ಇರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.