ಅಧಿಕಾರ ಹಂಚಿಕೆ ಕುರಿತಂತೆ ಹಗ್ಗಜಗ್ಗಾಟದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ನಿವಾಸ ಕಾವೇರಿಯಲ್ಲಿ ಶನಿವಾರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು. ಸುದೀರ್ಘ ಮಾತುಕತೆ ನಂತರ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು.