ಅಸ್ಸಾಂನಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ಅನುಮತಿ ದೊರೆತ ವಿಚಾರವಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಕರ್ನಾಟಕ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ವಾಗ್ವಾದ ನಡೆಯುತ್ತಿದೆ.
ದೊಡ್ಡ ಕೈಗಾರಿಕೆಗಳ ಸ್ಥಾಪಿಸಲು ಈಶಾನ್ಯ ರಾಜ್ಯಗಳಲ್ಲಿ ಪ್ರತಿಭೆಗಳ ಕೊರೆತೆಯಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಸ್ವಾ, ಪ್ರಿಯಾಂಕ್ ಅವರನ್ನು ‘ಫಸ್ಟ್ ಕ್ಲಾಸ್ ಈಡಿಯಟ್’ ಎಂದು ಕರೆದಿದ್ದರು.
ಈ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಒಬ್ಬ ಮೂರನೇ ದರ್ಜೆ ವಂಚಕ ಎಂದು ತಿರುಗೇಟು ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.