ಮಣಿಪುರ ಬಹಳ ಸಮಯದಿಂದ ಸಮಸ್ಯೆಯಿಂದ ಬಳಲುತ್ತಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈಗ ಗಲಭೆಪೀಡಿತ ರಾಜ್ಯಕ್ಕೆ ಭೇಟಿ ನೀಡುವುದು "ದೊಡ್ಡ ವಿಷಯ"ವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
"ವೋಟ್ ಚೋರಿ"(ಮತ ಕಳ್ಳತನ) ಪ್ರಸ್ತುತ ದೇಶದ ಮುಂದಿರುವ ಅತ್ಯಂತ ಪ್ರಮುಖ ವಿಷಯವಾಗಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ಒತ್ತಿ ಹೇಳಿದರು.
ಈಮಧ್ಯೆ, ಪ್ರಧಾನಿ ಮೋದಿ ಭೇಟಿಗೂ ಮುನ್ನ ಸೆಪ್ಟೆಂಬರ್ 12 ರಂದು ಮಣಿಪುರದ ಚುರಾಚಂದ್‌ಪುರದಲ್ಲಿ ಬ್ಯಾರಿಕೇಡ್‌ಗಳು ಮತ್ತು ಸೌಂದರ್ಯೀಕರಣ ಕಾಮಗಾರಿಗಳನ್ನು ಧ್ವಂಸಗೊಳಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.