ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮೇಘಸ್ಫೋಟ ಸಂಭವಿಸಿದ್ದು, ತಮ್ಸಾ ನದಿ ಉಕ್ಕಿ ಹರಿಯುತ್ತಿದೆ.
ಪರಿಣಾಮ ಇಲ್ಲಿನ ಹಲವಾರು ಮನೆಗಳು, ದೇವಾಲಯಗಳು ಜಲಾವೃತವಾಗಿದೆ. ಘಟನೆಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಪ್ರಮುಖ ದೇವಾಲಯಗಳಲ್ಲಿ ಒಂದಾಗಿರುವ ತಪಕೇಶ್ವರ ಮಹಾದೇವ ದೇವಾಲಯ ಜಲಾವೃತಗೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.