ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಭಾರತದ ಚುನಾವಣಾ ಆಯೋಗದ ಮೇಲೆ ತೀವ್ರ ವಾಗ್ದಾಳಿ ಮುಂದುವರಿಸಿದ್ದಾರೆ.
ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರನ್ನು "ಮತ ದೋಚುವವರನ್ನು ರಕ್ಷಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.
ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6018 ಮತದಾರರ ಹೆಸರು ಅಳಿಸಲಾಗಿದೆ. 2023 ರ ಚುನಾವಣೆಯಲ್ಲಿ ಆಳಂದದಲ್ಲಿ 6,018 ಕ್ಕಿಂತ ಹೆಚ್ಚು ಮತಗಳನ್ನು ಅಳಿಸಲಾಗಿದೆ.
ಬೂತ್ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಸ್ವಂತ ಚಿಕ್ಕಪ್ಪನ ಮತವನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಕಂಡುಕೊಂಡಾಗ ಈ ವಂಚನೆ ಆಕಸ್ಮಿಕವಾಗಿ ಬಹಿರಂಗವಾಯಿತು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.