ಭಾರಿ ಮಳೆ ಪರಿಣಾಮ ಕಲ್ಯಾಣ ಕರ್ನಾಟಕ ಪ್ರದೇಶದ ಹಲವಾರು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ನಿರಂತರ ಮಳೆ ಮತ್ತು ಉಕ್ಕಿ ಹರಿಯುತ್ತಿರುವ ಭೀಮಾ ನದಿ ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಅಣೆಕಟ್ಟುಗಳಿಂದ ನೀರು ಬಿಟ್ಟ ಪರಿಣಾಮ ಲಕ್ಷಾಂತರ ಎಕರೆ ಪ್ರದೇಶದಲ್ಲಿದ್ದ ಬೆಳೆಗಳು ನಾಶವಾಗಿದೆ.
ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ವಿಡಿಯೋ ಇಲ್ಲಿದೆ ನೋಡಿ.