ಮಹಾರಾಷ್ಟ್ರದಿಂದ ಡ್ಯಾಂಗಳಿಗೆ ಭಾರೀ ಪ್ರಮಾಣದಿಂದ ನೀರು ಬಿಟ್ಟಿರುವುದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಕಲಬುರಗಿ, ರಾಯಚೂರು, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.