ರಾಜ್ಯದಲ್ಲಿ ಹಿಂದಿ ಹೇರಿಕೆಗೆ ರಾಜಭವನ ಯತ್ನಿಸುತ್ತಿದೆ ಎಂದು ಅರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ.
ರಾಜ್ಯಪಾಲರ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ನಗರದ ಫ್ರೀಡಂಪಾರ್ಕ್ ನಲ್ಲಿ ಸೋಮವಾರ ಹೋರಾಟ ನಡೆಸಿದೆ.
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಆಗ್ರಹಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.