ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಧಾರವಾಡದ ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್ ಪಠಾಣ್ ವಾಸವಿದ್ದರು.
ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ತೀವ್ರ ರಕ್ತಸ್ರಾವವಾಗಿ ಫೈರೋಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಕೂಡಲೇ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.