ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಇಬ್ಬರು ಪುತ್ರರು ಮತ್ತು ಇತರರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ.
ಬಿಟ್‌ಕಾಯಿನ್ ಅಕ್ರಮ ವಹಿವಾಟು ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಉರುಫ್ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಸಂಬಂಧ ಈ ದಾಳಿ ನಡೆದಿದೆ.
ಸೋಮವಾರ ಬೆಳಿಗ್ಗೆ ಇ.ಡಿ ಬೆಂಗಳೂರು ವಲಯದ 100ಕ್ಕೂ ಹೆಚ್ಚು ಸಿಬ್ಬಂದಿ ಶಾಸಕ ಮತ್ತು ನಲಪಾಡ್ ಅವರ ತಂದೆ ಎನ್.ಎ.ಹ್ಯಾರಿಸ್ ಅವರ ಶಾಂತಿನಗರದ ನಿವಾಸವೂ ಸೇರಿ ಒಟ್ಟು 17 ಕಡೆ ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.