ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಭಯೋತ್ಪಾದಕ" ಎಂದು ಟೀಕಿಸುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಖರ್ಗೆ ಮಾತನಾಡಿದರು.
ಟೆರರಿಸ್ಟ್ ಪ್ರಧಾನಿ ಮೋದಿ ಅವರೊಂದಿಗೆ ಎಐಎಡಿಎಂಕೆ ಕೈಜೋಡಿಸಿರುವುದು ನಿಜಕ್ಕೂ ವಿಷಾದನೀಯ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.