ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ರಾಜ್ಯದ ಎಲ್ಲಾ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ಇದೆ. ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುತ್ತದೆ ಮತ್ತು ಅದನ್ನು ಎಲ್ಲರೂ ಪಾಲಿಸಬೇಕಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಬಗ್ಗೆ ಮಾತನಾಡಿ, ಅದು ದಲಿತರು ಸೇರಿದಂತೆ ಜನರ ಬಯಕೆಯಾಗಿದ್ದು, ಈ ಕುರಿತು ಯಾವುದೇ ಲಾಬಿ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪವಾಗಿದೆ ಎಂಬ ವದಂತಿಗಳ ಬಗ್ಗೆ ಜಿ ಪರಮೇಶ್ವರ, ಅವರು ಕರ್ನಾಟಕದ ಮುಖ್ಯಮಂತ್ರಿಯಾದರೆ ನಮಗೆಲ್ಲರಿಗೂ ಸಂತೋಷ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.