ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿಬಂದಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟಕ್ಕೆ ಆಯ್ಕೆಯಾಗಿರುವ ನೂತನ ಸಚಿವರು ಸೋಮವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಲೋಕಭವನ ತಿಳಿಸಿದೆ.
ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ.
ಈ ಮಧ್ಯೆ, ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ತನ್ವೀರ್ ಸೇಠ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಶಾಸಕ ಜಮೀರ್ ಅಹ್ಮದ್ ಖಾನ್, ಮಧು ಬಂಗಾರಪ್ಪ ಮತ್ತು ಶಾಸಕ ಅಜಯ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.