ಯಾದಗಿರಿ ಜಿಲ್ಲೆಯ ಕಡೇಚೂರ್-ಬಡಿಯಾಲ್ ಕೈಗಾರಿಕಾ ಪ್ರದೇಶದ ಔಷಧ ತಯಾರಿಕಾ ಘಟಕದಲ್ಲಿ ಬುಧವಾರ ಸಂಭವಿಸಿದ ರಾಸಾಯನಿಕ ಸೋರಿಕೆಯಲ್ಲಿ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಔಷಧೀಯ ಉತ್ಪನ್ನಗಳನ್ನು ತಯಾರಿಸುವ ಸಿ.ಐ.ಎಲ್. ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ರಾಸಾಯನಿಕ ಸೋರಿಕೆ ಸಂಭವಿಸಿದೆ.
ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ರಾಸಾಯನಿಕ ಸೋರಿಕೆಯಿಂದ ಸಾವನ್ನಪ್ಪಿದ್ದರೆ, ಇಬ್ಬರು ಉಸಿರುಗಟ್ಟುವಿಕೆಯಿಂದ ಅಸ್ವಸ್ಥರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.