ಪಾಕಿಸ್ತಾನ, ಸೌದಿ ಅರೇಬಿಯಾ ಮತ್ತು ಟರ್ಕಿ ಶುಕ್ರವಾರ ಮೆಕ್ಕಾದಲ್ಲಿ ಪ್ರಮುಖ ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಒಪ್ಪಂದದ ಅಡಿಯಲ್ಲಿ, ಈ ದೇಶಗಳ ಪೈಕಿ ಯಾವುದೇ ಒಂದು ದೇಶದ ಮೇಲೆ ದಾಳಿ ನಡೆದರೂ ಆ ದಾಳಿಯನ್ನು ಉಳಿದ ಸದಸ್ಯ ರಾಷ್ಟ್ರಗಳ ವಿರುದ್ಧದ ದಾಳಿ ಎಂದು ಪರಿಗಣಿಸಲಾಗುತ್ತದೆ.
ಮೂರು ದೇಶಗಳು ಮೆಕ್ಕಾ ಜಂಟಿ ರಕ್ಷಣಾ ಒಪ್ಪಂದ ಎಂದು ಕರೆಯುವ ಈ ಒಪ್ಪಂದ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ, ಭದ್ರತಾ ಆತಂಕಗಳ ಹಿನ್ನೆಲೆಯಲ್ಲಿ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಮತ್ತು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಮೆಕ್ಕಾದಲ್ಲಿ ನಡೆದ ಜಂಟಿ ರಕ್ಷಣಾ ಶೃಂಗಸಭೆಯ ನಂತರ ಒಪ್ಪಂದಕ್ಕೆ ಸಹಿ ಹಾಕಿದರು. ವಿಡಿಯೋ ಇಲ್ಲಿದೆ ನೋಡಿ.