ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ಬಂದ್ ನಡೆಸುವ ವಿಚಾರದಲ್ಲಿ ವಿವಿಧ ಸಂಘಟನೆಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ.
ನಾವು ನಾಳೆ ಕರ್ನಾಟಕ ಬಂದ್ ಆಚರಿಸುವುದಿಲ್ಲ, ಆದರೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಬುಧವಾರ ಸ್ಪಷ್ಟಪಡಿಸಿದೆ.
ಅಲ್ಲದೆ, ಹೋರಾಟಗಾರ ವಾಟಾಳ್ ನಾಗರಾಜ್ ಬಂದ್‌ನಿಂದ ಹಿಂದೆ ಸರಿಯುವಂತೆ ಒತ್ತಾಯಿಸುತ್ತೇವೆ ಎಂದು ಪ್ರವೀಣ್ ಶೆಟ್ಟಿ ಬಣ ಹೇಳಿದೆ.
ಇದಕ್ಕೆ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಬಂದ್ ಗೆ ಬಂದ್ ಗೆ ಬೆಂಬಲ ನೀಡಿದ್ದೇ ಅವ್ರು, ಈಗ ಯಾಕೆ ಹಿಂದೇಟು? ನಾವು ಬಂದ್ ಮಾಡೇ ಮಾಡ್ತೀವಿ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.