ಕರ್ತವ್ಯದಲ್ಲಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ (ಪಿಎಸ್‌ಐ) ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಗೌಡ ಅವರು, ಮಗಳು ಆ ಕ್ಷಣದಲ್ಲಿ ತಾಳ್ಮೆ ಕಳೆದುಕೊಂಡಿರಬಹುದು. ಆದರೆ, ಸಾರ್ವಜನಿಕ ಜೀವನದಲ್ಲಿರುವವರು ಇಂತಹ ವರ್ತನೆ ತೋರಬಾರದು ಎಂದು ಹೇಳಿದ್ದಾರೆ.
ಈ ಸಂಬಂಧ ಪಿಎಸ್‌ಐ ಸವಿತಾ ಅವರು ನೀಡಿದ ದೂರಿನ ಆಧಾರದ ಮೇಲೆ ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.