ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಗದಗದ ರೋಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿ.ಎಸ್. ಪಾಟೀಲ್ ಎಂದೇ ಜನಪ್ರಿಯರಾಗಿರುವ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದರು ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅನುಮೋದಿಸಿದರು.
ಶುಕ್ರವಾರ ನಡೆದ ಸಭೆಯಲ್ಲಿ ಹಂಗಾಮಿ ಸ್ಪೀಕರ್ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ವಿಡಿಯೋ ಇಲ್ಲಿದೆ ನೋಡಿ.