ಪುಷ್ಕರಿಣಿ ವಿವಾದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಭವಾನಿ ಶಂಕರ್ ದೇವಸ್ಥಾನದ ಕಡೆಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದ ನೂರಾರು ಪ್ರತಿಭಟನಾಕಾರರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಹಳೆ ಹುಬ್ಬಳ್ಳಿಯ ಚನ್ನಪೇಟೆಯಲ್ಲಿ ಸುಮಾರು 200 ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಶಾಸಕರಾದ ಅರವಿಂದ್ ಬೆಲ್ಲದ್ ಮತ್ತು ಮಹೇಶ್ ಟೆಂಗಿನಕಾಯಿ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಇತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿಡಿಯೋ ಇಲ್ಲಿದೆ ನೋಡಿ.