ಗಾಂಧಿ ಭವನದಲ್ಲಿ ನಡೆದ 'ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ'ದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಕಾರ್ಯಕ್ರಮದಲ್ಲಿ ಸಭಿಕರೊಬ್ಬರು ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸಿದರು. ಇದರಿಂದ ಕೊಂಚ ಭಾವೋದ್ವೇಗಕ್ಕೊಳಗಾದ ಸಿದ್ದರಾಮಯ್ಯ, ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು?
ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ ಎಂದು ನೇರವಾಗಿ ಹೇಳಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಸಿದ್ದರಾಮಯ್ಯ ನನ್ನ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಶಿಫಾರಸು ಮಾಡಿದ್ದರು. ಆದರೆ ಹೈಕಮಾಂಡ್ ಸ್ಕೀಮ್ ಬೇರೆಯೇ ಇತ್ತು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.