ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ನಡೆಸಿದ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ (FIR) ದಾಖಲಿಸಬೇಕೆಂದು ರಾಹುಲ್ ಗಾಂಧಿ ಶನಿವಾರ ಆಗ್ರಹಿಸಿದರು.
ದೆಹಲಿಯ ಇಂದಿರಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಶುದ್ಧೀಕರಣ ವಿಧಾನವನ್ನು ಅಸ್ಪೃಶ್ಯತೆಯ ಆಚರಣೆ ಮತ್ತು ಸಂವಿಧಾನದ ಉಲ್ಲಂಘನೆ ಎಂದು ಹೇಳಿದರು.
ದಲಿತರ ಘನತೆ ಮತ್ತು ಪ್ರಗತಿಯನ್ನು ವಿರೋಧಿಸುವ "ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ"ಯನ್ನು ಈ ಘಟನೆ ಪ್ರತಿಬಿಂಬಿಸುತ್ತದೆ ಎಂದರು.
ಖರ್ಗೆ ಅವರು ಆಗಸ್ಟ್ 8 ರಂದು ಉತ್ತರಾಖಂಡದ ಹಲ್ದ್ವಾನಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ವಿಡಿಯೋ ಇಲ್ಲಿದೆ ನೋಡಿ.