ಇಸ್ಲಾಂ ಇಡೀ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಧರ್ಮವಾಗಿದ್ದು, ನನಗೆ ಹಜ್ ಯಾತ್ರೆಗೆ ಹೋಗುವ ಆಸೆಯಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಯರೆಡ್ಡಿ ಮಾತನಾಡಿದರು.
ನಾನು ಹೆಚ್ಚಾಗಿ ಮಠ-ಮಂದಿರಕ್ಕೆ ಹೋಗಲ್ಲ. ಆದರೆ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದರು.
ಇಸ್ಲಾಂ ಧರ್ಮದ ಕುರಿತು ತಾವು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಸಚಿವ ಬಸವರಾಜ ರಾಯರೆಡ್ಡಿ ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.