ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ರೊಚ್ಚಿಗೆದ್ದು, ಬಿಜೆಪಿಯರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.
ನನ್ನನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗಿದೆ ಎಂದು ಆಕ್ರೋಶಗೊಂಡ ಶಿವಲಿಂಗೇಗೌಡ ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ ಹರಿಹಾಯ್ದರು.
ಅಬಕಾರಿ ಹಗರಣದ ಬಗ್ಗೆ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಶಿವಲಿಂಗೇಗೌಡ ಅವರು ಕಟು ಪದಗಳಲ್ಲಿ ಬಳಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.