ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು, ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ದೆಹಲಿಯ ಜನಕಪುರಿಯಲ್ಲಿ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿಯನ್ನು ಕೈಲಾಶಪುರಿಯ ನಿವಾಸಿ ಕಮಲ್ ಎಂದು ಗುರುತಿಸಲಾಗಿದೆ.
ಇವರು ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಶುಕ್ರವಾರ ಬೆಳಗಿನ ಜಾವ ಕಮಲ್ ಅವರ ಮೃತದೇಹವು ಅವರ ಮೋಟಾರ್‌ಸೈಕಲ್ ಜೊತೆಯಲ್ಲೇ ಗುಂಡಿಯೊಳಗೆ ಪತ್ತೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.