ವಿಡಿಯೋ

Watch | ದೆಹಲಿ ಮಸೀದಿ ಬಳಿ ಅತಿಕ್ರಮಣ ತೆರವು ವೇಳೆ ಹಿಂಸಾಚಾರ: ಐವರ ಬಂಧನ

ದೆಹಲಿಯ ರಾಮಲೀಲಾ ಮೈದಾನ ಪ್ರದೇಶದ ಸೈಯದ್ ಫೈಜ್ ಇಲಾಹಿ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಈ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿ ಐದು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಮಸೀದಿಗೆ ಹೊಂದಿಕೊಂಡಿರುವ ಭೂಮಿ ಮತ್ತು ಹತ್ತಿರದ ಸ್ಮಶಾನದಲ್ಲಿ ದೆಹಲಿ ಹೈಕೋರ್ಟ್‌ ಆದೇಶದ ಮೇರೆಗೆ ಧ್ವಂಸ ಕಾರ್ಯ ನಡೆಯುತ್ತಿತ್ತು.

ಈ ವೇಳೆ, ಕೆಲವು ಜನರು ಕಾರ್ಯಪಡೆಗಳ ಮೇಲೆ ಕಲ್ಲು ಮತ್ತು ಗಾಜಿನ ಬಾಟಲಿಗಳನ್ನು ಎಸೆದಿದ್ದರಿಂದ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್