ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ-2025ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಭಾಷಾ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾಷೆಯು ಕೇವಲ ಶೈಕ್ಷಣಿಕ ಆಯ್ಕೆಯಲ್ಲ, ಅದು ಅವರ ಅಸ್ಮಿತೆ, ಘನತೆ ಮತ್ತು ಅವಕಾಶಗಳಿಗೆ ದಾರಿಯಾಗಿದೆ.