ತಮಿಳುನಾಡಿನಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಆಗಮಿಸಿರುವ ರಾಹುಲ್ ಗಾಂಧಿ, ಮೈಸೂರಿನ ವಿಮಾನ ನಿಲ್ದಾಣ ಮೂಲಕವಾಗಿ ತೆರಳಿದ್ದಾರೆ.
ಈ ವೇಳೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಕೆಲ ಕಾಲ ಮತುಕತೆ ನಡೆಸಿದರು.
ಇದಕ್ಕೂ ಮುನ್ನ ಸಿದ್ದರಾಮಯ್ಯ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನಾಯಕತ್ವ ಬದಲಾವಣೆ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ, HD ಕುಮಾರಸ್ವಾಮಿ ಹೇಳಿಕೆಗಳು ಮತ್ತು ಇತರ ವಿಷಯಗಳ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ವಿಡಿಯೋ ಇಲ್ಲಿದೆ ನೋಡಿ.