ಪ್ರಕೃತಿಯೊಂದಿಗೆ ಸಾಮರಸ್ಯದ ಸಮತೋಲನವನ್ನು ಕಾಪಾಡಿಕೊಳ್ಳುವ ಸಂದೇಶವನ್ನು ನೀಡುವ ಪೊಂಗಲ್, ಜಾಗತಿಕ ಹಬ್ಬವಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
ಕೇಂದ್ರ ಸಚಿವ ಎಲ್ ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಹಬ್ಬದ ಆಚರಣೆಯಲ್ಲಿ ಪ್ರಧಾನಿ ಭಾಗವಹಿಸಿದ್ದರು.
ಈ ಹಬ್ಬವು ರೈತರ ಕಠಿಣ ಪರಿಶ್ರಮವನ್ನು ಆಚರಿಸುತ್ತದೆ ಮತ್ತು ಭೂಮಿ ಮತ್ತು ಸೂರ್ಯನಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತದೆ ಎಂದು ಮೋದಿ ಈ ಸಂದರ್ಭದಲ್ಲಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.